Skip to main content

ಮಧ್ಯಪಾನವನ್ನು ನಿಷೇಧಿಸಿ - ನಮ್ಮ ಸಂಸಾರಗಳನ್ನು ಉಳಿಸಿ"

'ದುಡಿಯವ ತಾಯಂದಿರ ಕಾಲುಗಳನ್ನು ಮತ್ತಷ್ಟು ದಣಿಸದಿರಿ' 'ಮದ್ಯಪಾನ ನಿಷೇಧಿಸಿ ನಮ್ಮ ಸಂಸಾರಗಳನ್ನು ಉಳಿಸಿ' ಎಂಬ ಅಹವಾಲಿನೊಂದಿಗೆ ಸಾವಿರಾರು ಸಂಖ್ಯೆಯಲ್ಲಿ ಬೆಂಗಳೂರಿನತ್ತ ಬರಿಗಾಲಲ್ಲಿ ಇಲ್ಲವೆ ಹರಿದ ಚಪ್ಪಲಿಗಳಲ್ಲಿ ನಡೆದು ಬರುತ್ತಿರುವ ಮಹಿಳೆಯರ ನೋವಿಗೆ ಕಿವಿಗೊಟ್ಟು, ಸಮಸ್ಯೆಗೆ ಪರಿಹಾರ ಸೂಚಿಸಿ' ಎಂದು ಸಾಹಿತಿ ದೇವನೂರ ಮಹಾದೇವ ಹಾಗೂ ಎಸ್‌.ಆರ್‌. ಹಿರೇಮಠ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ. 'ದುಡಿದ ಗ್ರಾಮೀಣ ಮಹಿಳೆಯರ ಕಾಲುಗಳನ್ನು ಮತ್ತಷ್ಟು ದಣಿಸದಿರಿ, ಬೆಂದಿರುವ ಮನಸುಗಳನ್ನು ಮತ್ತಷ್ಟು ಬಳಲಿಸದಿರಿ. ಮೊದಲು ಅವರ ಜೊತೆ ಕೂತು ಮಾತನಾಡಿ' ಎಂದು ಅವರು ಪತ್ರದಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ. ಪತ್ರದ ಪೂರ್ಣಪಾಠ ** ಮಾನ್ಯ ಮುಖ್ಯಮಂತ್ರಿ ಶ್ರೀ ಎಚ್.ಡಿ.ಕುಮಾರಸ್ವಾಮಿಯವರೇ, ತುರ್ತು ಸಾಮಾಜಿಕ ಅಳಲೊಂದನ್ನು ತಮ್ಮ ಗಮನಕ್ಕೆ ತರಲೇಬೇಕಿರುವುದರಿಂದ ನಾವು ಈ ಬಹಿರಂಗ ಪತ್ರ ಬರೆಯುತ್ತಿದ್ದೇವೆ. ನಮ್ಮ ಗ್ರಾಮೀಣ ತಾಯಂದಿರು ಬರಿಗಾಲಲ್ಲಿ ಅಥವಾ ಹರಿದ ಚಪ್ಪಲಿಗಳಲ್ಲಿ, "ಮಧ್ಯಪಾನವನ್ನು ನಿಷೇಧಿಸಿ - ನಮ್ಮ ಸಂಸಾರಗಳನ್ನು ಉಳಿಸಿ" ಎಂಬ ಅಹವಾಲಿನೊಂದಿಗೆ
ಸಾವಿರಾರು ಸಂಖ್ಯೆಯಲ್ಲಿ ನಿಮ್ಮನ್ನು ಕಾಣಲು ಬೆಂಗಳೂರಿನತ್ತ ನಡೆದು ಬರುತ್ತಿದ್ದಾರೆ. ಅವರು ನಡೆಯಲು ಪ್ರಾರಂಭಿಸಿ ಇಂದಿಗೆ 5 ದಿನಗಳಾದುವು. ಇದೇ 19ರಂದು ಚಿತ್ರದುರ್ಗದಿಂದ ಅವರು ಪಾದಯಾತ್ರೆ ಹೊರಟಾಗ ಅನೇಕ ಸ್ವಾಮೀಜಿಗಳು ಹಾಗೂ ಸಂಘ ಸಂಸ್ಥೆಗಳ ಮುಂದಾಳುಗಳು, ರಾಜ್ಯದ ಬೇರೆ ಬೇರೆ ಮೂಲೆಗಳಿಂದ ಬಂದಿದ್ದ ಆ ತಾಯಂದಿರ ದಿಟ್ಟತನವನ್ನು ಶ್ಲಾಘಿಸಿ, ಅವರ ಹೋರಾಟಕ್ಕೆ ಶುಭ ಹಾರೈಸಿ ಬೀಳ್ಕೊಟ್ಟಿದ್ದರು. ಎಲ್ಲಾ ಪತ್ರಿಕೆಗಳಲ್ಲೂ ಇದು ದೊಡ್ಡ ಸುದ್ದಿಯೇ ಆಗಿತ್ತು. ಇದು ತಮ್ಮ ಗಮನಕ್ಕೆ ಬಂದಿರಲೇಬೇಕಿತ್ತು. ಸರ್ಕಾರ ಪ್ರತಿಕ್ರಿಯಿಸಬಹುದೆಂಬ ನಿರೀಕ್ಷೆಯೂ ಹಲವರಿಗಿತ್ತು. ಆದರೆ ಅಂತಹುದೇನೂ ಆಗದಿರುವುದು ಅಚ್ಚರಿ ಮೂಡಿಸಿದೆ. ಅದೇ ದಿನಗಳಲ್ಲಿ ಶಾಸಕರಿಬ್ಬರು ರೆಸಾರ್ಟ್‍ನಲ್ಲಿ ಕುಡಿದ ಅಮಲಿನಲ್ಲಿ ಹೊಡೆದಾಡಿಕೊಂಡರೆಂಬ ಸುದ್ದಿ ನಮಗೆ ಆಘಾತವನ್ನುಂಟು ಮಾಡಿದೆ. ವಿಶ್ವಾಸವನ್ನು ಸೆರಗಲ್ಲಿ ಕಟ್ಟಿಕೊಂಡು, ನಿರೀಕ್ಷೆಗಳನ್ನು ಕಣ್ಣುಗಳಲ್ಲಿ ತುಂಬಿಕೊಂಡು ನಡೆಯುತ್ತಿರುವ ಈ ತಾಯಂದಿರ ಕುರಿತು ಒಂದಷ್ಟು ಮಾಹಿತಿಯನ್ನು ತಮ್ಮ ಗಮನಕ್ಕೆ ತರಲೇಬೇಕಿದೆ. ಈ ಪಾದಯಾತ್ರೆಯಲ್ಲಿ ಹೆಜ್ಜೆಹಾಕುತ್ತಿರುವವರೆಲ್ಲಾ ಬಹುತೇಕ ಕೂಲಿ ಮಾಡುವ ಹೆಣ್ಣು ಮಕ್ಕಳು. ಇವರು ಯಾವ ರಾಜಕೀಯ ಪಕ್ಷಕ್ಕೂ ಸೇರಿದವರಲ್ಲ, ಯಾವುದೋ ಸಂಘಟನೆಯ ಪ್ರಲೋಭನೆಯ ಮೇರೆಗೆ ಬೀದಿಗಿಳಿದವರಲ್ಲ. ಮಿತಿಮೀರಿ ಹೋಗಿರುವ ಕುಡಿತದ ಹಾವಳಿಯಿಂದ ನಲುಗಿ, ಕಣ್ಣೀರಿಟ್ಟು, ಕೈ ಸೋತು, ಕೊನೆಗೆ ಕೊನೆ ಆಸೆಯಾಗಿ ಹೋರಾಟಕ್ಕೆ ಇಳಿದವರು. ಮೂರು ವರ್ಷಗಳ ಹಿಂದೆ ರಾಯಚೂರಿನಲ್ಲಿ ಮದ್ಯಪಾನ ನಿಷೇಧಕ್ಕೆ ಆಗ್ರಹಿಸಿ 40 ಸಾವಿರ ಮಹಿಳೆಯರು ಸಮಾವೇಶಗೊಂಡು ನಮ್ಮೆಲ್ಲರನ್ನೂ ಚಕಿತಗೊಳಿಸಿದ್ದರು. ಆಗ ಸರ್ಕಾರ ಪ್ರತಿಕ್ರಿಯಿಸಲಿಲ್ಲ. ಆದರೆ ಈ ತಾಯಂದಿರು ವಿಶ್ವಾಸ ಕಳೆದುಕೊಳ್ಳಲಿಲ್ಲ. ಸರ್ಕಾರ ಮತ್ತೆ ಕಿವಿಗೊಡಲಿಲ್ಲ. ಇವರೂ ಹಟ ಬಿಡಲಿಲ್ಲ. ಕಳೆದ ಚುನಾವಣೆ ಸಂದರ್ಭದಲ್ಲಿ ಬರೋಬ್ಬರಿ 70 ದಿನ ಧರಣಿ ನಡೆಸಿದರು. ಓಟು ಕೇಳಲು ಬಂದ ರಾಜಕೀಯ ನಾಯಕರುಗಳ ಕಾರುಗಳನ್ನೆಲ್ಲಾ ಅಡ್ಡಗಟ್ಟಿದರು. ತಮ್ಮನ್ನೂ ಸಹ ಅವರು ಬೀದಿಯಲ್ಲಿ ಎದುರಾಗಿದ್ದರು. 'ಖಂಡಿತ ಏನಾದರೂ ಮಾಡೋಣ' ಎಂದು ನೀವೂ ಮಾತುಕೊಟ್ಟಿದ್ದಿರಿ. ಹೊಸ ಸರ್ಕಾರವೂ ಬಂತು, ಆದರೆ ಅವರ ಬದುಕಿನಲ್ಲಿ ನೆಮ್ಮದಿ ಮೂಡಲಿಲ್ಲ. ತಮ್ಮ ಸಂಸಾರಗಳನ್ನು ಉಳಿಸಿಕೊಳ್ಳುವ ದೃಢ ಸಂಕಲ್ಪ ಮಾಡಿರುವ ಈ ತಾಯಂದಿರು ಕೈ ಚೆಲ್ಲಲು ಸಿದ್ಧರಿಲ್ಲ. ಸರ್ಕಾರಕ್ಕೆ ನಮ್ಮ ಅಳಲು ಕೇಳಿಸುವಂತೆ ಮಾಡೇಮಾಡುತ್ತೇವೆ ಎಂಬ ದೃಢತೆಯೊಂದಿಗೆ ಅವರು ನಡಿಗೆ ಆರಂಭಿಸಿದ್ದಾರೆ. ಇವರೆಲ್ಲಾ ಯಾರೋ ಟೆಂಪೋ ಹತ್ತಿಸಿಕೊಂಡು ಬಂದ ಜನರಲ್ಲ ಅಥವ ಯಾರದೋ ಪ್ರಲೋಭನೆಯ ಮಾತಿಗೆ ಮರುಳಾಗಿರುವ ಮಹಿಳೆಯರಲ್ಲ. ಬದಲಿಗೆ ಸಂಸಾರಗಳನ್ನು ಉಳಿಸಿಕೊಳ್ಳಲು ಬೀದಿಗಿಳಿದಿರುವ ನಮ್ಮ ರಾಜ್ಯದ ಹೆಮ್ಮೆಯ ಬಡ ತಾಯಂದಿರು ಎಂಬುದನ್ನು ಮತ್ತೊಮ್ಮೆ ಒತ್ತಿ ತಮ್ಮ ಗಮನಕ್ಕೆ ತರಲು ಬಯಸುತ್ತೇವೆ. ಅಧಿಕಾರದಲ್ಲಿ ಕೂತವರ ಇಕ್ಕಟ್ಟುಗಳೂ ನಮಗೆ ಅರ್ಥವಾಗುತ್ತವೆ. ಕುಡುಕರು ಕುಡಿತದ ಚಟಕ್ಕೆ ಬಲಿಯಾಗಿರುವಂತೆ, ಈ ದೇಶದ ಸರ್ಕಾರಗಳು ಹೆಂಡದ ತೆರಿಗೆಯ ಚಟಕ್ಕೆ ಬಲಿಯಾಗಿವೆ. ಹೆಂಡ ಮಾರಿದ ಹಣ ಇಲ್ಲವೆಂದರೆ ಸರ್ಕಾರದ ಕೈಕಾಲುಗಳು ನಡುಗುತ್ತವೆ. ಹಾಗಂತ ಮದ್ಯದ ವ್ಯಸನದ ದಾಸ್ಯದಲ್ಲೇ ಸರ್ಕಾರ ಇರಲು ಸಾಧ್ಯವಿಲ್ಲ. ತಕ್ಷಣವೇ ಪರಿಪೂರ್ಣ ಪರಿಹಾರ ಲಭ್ಯವಿಲ್ಲವಾದರೂ ಆ ನಿಟ್ಟಿನಲ್ಲಿ ನಿಷ್ಠುರ ಹೆಜ್ಜೆ ಇಡಬೇಕಿರುವುದು ಜನ ಒಳಿತನ್ನು ಬಯಸುವ ಎಲ್ಲಾ ಸರ್ಕಾರಗಳ ಕರ್ತವ್ಯ. ಕನಿಷ್ಟ ಮದ್ಯಪಾನ ನಿಯಂತ್ರಣವಾಗಬೇಕು, ಕುಡುಕರ ಸಂಖ್ಯೆ ತಗ್ಗುವಂತೆ ಮಾಡಲು ಕ್ರಮಕೈಗೊಳ್ಳಬೇಕು. ತಮ್ಮ ಹಳ್ಳಿಯಲ್ಲಿ ಮದ್ಯ ಮಾರಾಟ ಆಗಬೇಕೋ ಬೇಡವೋ ಎಂಬುದನ್ನು ತೀರ್ಮಾನ ಮಾಡುವ ಹಕ್ಕು ಗ್ರಾಮ ಸಭೆಗಳಿಗೆ ಇರಬೇಕು. ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗಲು, ಸರ್ಕಾರವೇ ಮದ್ಯ ಮಾರಾಟದ ಟಾರ್ಗೆಟ್ ಹಿಗ್ಗಿಸುತ್ತಿರುವುದೇ ಕಾರಣ ಎಂಬುದಕ್ಕೆ ಆಧಾರಗಳಿವೆ. ಜನರು ನಮ್ಮ ಊರಿಗೆ 'ಹೆಂಡ' ಬೇಡ ಎಂದು ತೀರ್ಮಾನಿಸಿದರೂ ಮಾರುತ್ತೇವೆ ಎಂಬುದು ಯಾವ ನ್ಯಾಯ? ಪ್ರತಿ ವರ್ಷ ಕುಡಿತದ ಟಾರ್ಗೆಟ್ ಹೆಚ್ಚಿಸಿ ಮದ್ಯಪಾನವನ್ನು ಪ್ರಚೋದಿಸುತ್ತಿರುವ ಅಬಕಾರಿ ಇಲಾಖೆಯ ಧೋರಣೆಯನ್ನು ಏನೆನ್ನಬೇಕು? ಬಡಜನರ ದುಡಿಮೆಯೆಲ್ಲಾ ಬಾಚಿಹೋಗುತ್ತಿದ್ದರೂ, ಕುಟುಂಬಗಳ ಗೌರವ ಗಟಾರದ ಪಾಲಾಗುತ್ತಿದ್ದರೂ, ಮನೆಯ ನೆಮ್ಮದಿ ಬೀದಿಪಾಲಾಗುತ್ತಿದ್ದರೂ 'ನಾವೇನು ಮಾಡಲಾಗುತ್ತದೆ?' ಎನ್ನುವ ಜನ ಪ್ರತಿನಿಧಿಗಳು ಜನರ ಪ್ರತಿನಿಧಿಗಳು ಹೇಗಾದಾರು? ಕುಡಿತ ಒಂದು ಪಿಡುಗಾಗಿ ಸಮಾಜದ ಆರೋಗ್ಯವನ್ನು ನಾಶ ಮಾಡುತ್ತಿರುವುದು ಕಣ್ಣಿಗೆ ರಾಚುತ್ತಿರುವಾಗ ಸುಮ್ಮನಿರುವುದು ಜನಪರ ಸರ್ಕಾರದ ಲಕ್ಷಣವಲ್ಲ. ಸುಮ್ಮನಿದ್ದರೆ ಅದು ಜನಪರ ಸರ್ಕಾರವೇ ಅಲ್ಲ. ನಾವು ತಮ್ಮಲ್ಲಿ ಕೇಳಿಕೊಳ್ಳುವುದು ಇಷ್ಟೆ - ಮೊದಲು ಹಗಲಿರುಳೆನ್ನದೆ ನಡೆಯುತ್ತಿರುವ ಆ ತಾಯಂದಿರ ಬಳಿ ಹೋಗಿ, ಅವರ ಛಿದ್ರಗೊಂಡ ಬದುಕಿನ ವೇದನೆಗೆ ಕಿವಿಗೊಡಿ, ಅವರ ಜೊತೆ ಕೂತು ಪರಿಹಾರದ ಮಾರ್ಗಗಳ ಕುರಿತು ಚರ್ಚಿಸಿ, ಅನುಭವಿ ಸಾಮಾಜಿಕ ಕಾರ್ಯಕರ್ತರ, ತಜ್ಞರ ಸಲಹೆಗಳನ್ನು ಪಡೆದುಕೊಳ್ಳಿ, ಎಲ್ಲರ ನೆರವಿನೊಂದಿಗೆ ಈ ಪಿಡುಗಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಒಂದು ಒಳ್ಳೆಯ ಹೆಜ್ಜೆಯನ್ನಿಡಿ. ಸರ್ಕಾರದ ಇಕ್ಕಟ್ಟುಗಳು ಏನೇ ಇರಲಿ ಮೊದಲು ದುಡಿದ ತಾಯಂದಿರ ಕಾಲುಗಳನ್ನು ಮತ್ತಷ್ಟು ದಣಿಸದಿರಿ, ಬೆಂದಿರುವ ತಾಯಂದಿರ ಮನಸುಗಳನ್ನು ಮತ್ತಷ್ಟು ಬಳಲಿಸದಿರಿ. ಮೊದಲು ಅವರ ಜೊತೆ ಕೂತು ಮಾತನಾಡಿ ಎಂಬುದು ನಮ್ಮ ಮನವಿ. ಇದುವರೆಗಿನ ಸರ್ಕಾರಗಳು ಮಾಡಿದಂತೆಯೇ ನೀವೂ ದಿವ್ಯ ಮೌನದ ಮೊರೆ ಹೋಗುವುದಿಲ್ಲ ಎಂಬ ವಿಶ್ವಾಸದೊಂದಿಗೆ, ನಿಮ್ಮ ವಿಶ್ವಾಸಿಗಳು -ಎಸ್.ಆರ್. ಹಿರೇಮಠ -ದೇವನೂರು ಮಹಾದೇವ [ಜನಾಂದೋಲನಗಳ ಮಹಾಮೈತ್ರಿಯ ಹಾಗೂ ಈ ನಾಡಿನ ಪ್ರಜ್ಞಾವಂತ ನಾಗರಿಕರ ಪರವಾಗಿ]

Comments

ಪಾಪುಲರ್ ಪೋಸ್ಟ್‌

SSC Jobs 2021 Staff Selection Commission 3260 central government Jobs Apply now

  Jobs 2021 – Highlights SSC( Staff Selection Commission) invited applications for PUC Diploma Degree ITI Candidates to fill up the 3200+ Posts through online.  Job seekers who are looking to join central government jobs can make use this opportunity. there is no Application fee for women, SC/ST, PWD Candidates. Read the full post comple tely to get Full Job details according to your education qualification. Name of the Board         :     Staff Selection Commission Name of the Post                           :    SSC Phase 9 Advertisement Number              : No of Vacancies                               :   3000+ Job Category                     ...

CECRI Recruitment 2021 || 54 Vacancies || Apply online

                                            Jobs 2021 – Highlights Name of the Board Central Electrochemical Research Institute  Name of the Post Technical Assistants / Technicians Advertisement Number Advt_02_2021_Technical.pdf No of Vacancies 54  Job Category Central Govt Jobs  Starting Date to Apply September 2021 Last Date of Registration 27th September 2021  Application Mode  Apply Online  Job Location Karaikudi - 630003, Tamil Nadu  Official Website https://cecri.res.in/jobs/Advt_02_2021_Technical.pdf Eligibility Criteria    Educational Qualification   Technical Assistant:   1st Class B.Sc. degree / Diploma in Chemistry / Physics /                                    ...

IB Recruitment 2021 || 500+ vacancy || Within 60 days

                                            Jobs 2021 – Highlights Name of the Board Intelligence Bureau  Name of the Post Junior Intelligence Officer, MTS, Accountant & Other Advertisement Number No of Vacancies 500+  Job Category Central Govt Jobs  Starting Date to Apply 27th August 2021 Last Date of Registration Within 2 months  Application Mode  Apply Offline  Job Location All over India  Official Website mha.gov.in Vacancy details Name of the Post Name of the Post Multi Tasking Staff -24 Junior Intelligence Officer-II/Tech -168 Halwei cum Cook -11 Assistant Central Intelligence Officer-I / Executive -56 Security Assistant (Motor Transport) --20 Assistant Central Intelligence Officer-II / Executive -98 Junior Intelligence Officer – II (Motor Transport) -...

Best Work from Home jobs earn money online

Earn Money using Social Platforms :  Make Money through online Activities You can earn money through your online social activities like: Answer Quiz's, Post videos on Youtube,  Play Games, Install Mobile   Applications, Take Online Surveys, Complete offers,  Do Online Job Task, Watch Videos, Post On Instragram, Facebook etc.  But its not a Job, Its just create extra money for your online activities.  Best Free Make Money Online websites like Ysense, neobucks, Timebucks, FushionCash etc. timebucks.com Earn money through take Micro tasks, create tik tok videos, watch videos, Complete Offers etc. The site owned by Australian Clearing Pty Ltd. Minimum payout: $10 Payment methods: Paypal, Payeer etc. www.swagbucks.com: Earn money / rewards through take online surveys, Daily Poll, Tasks and complete online offers. The site owned by Prodege LLC, the company is one of leading online marketing company based in California, USA Minimum payout: $25...